CCL 2025 : ಕರ್ನಾಟಕ ಬುಲ್ಡೋಜರ್ಸ್‌ ಅಬ್ಬರಕ್ಕೆ ಶರಣಾದ ಮುಂಬೈ ಹೀರೋಸ್‌

ಕರ್ನಾಟಕ ಬುಲ್ಡೋಜರ್ಸ್‌
ಕರ್ನಾಟಕ ಬುಲ್ಡೋಜರ್ಸ್‌
ಸಿನಿಮಾ-ಟಿವಿ

CCL 2025:

ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 ಪಂದ್ಯವಾಳಿಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಗೆಲುವಿನ ಓಟ ಮುಂದುವರೆದಿದೆ. ಶನಿವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಹೀರೋಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್‌ ತಂಡ 85 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಮೂರು ಪಂದ್ಯಗಳನ್ನಾಡಿದ್ದು ಮೂರರಲ್ಲೂ ಭರ್ಜರಿ ಗೆಲುವು ಸಾಧಿಸಿದೆ.

ಮುಂಬೈ ಇಂಡಿಯನ್ಸ್‌ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಮೊದಲ 10 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಬರೋಬ್ಬರಿ 171 ರನ್ ಕಲೆಹಾಕಿತು. ಮೊದಲ ಇನ್ನಿಂಗ್ಸ್​ನಲ್ಲಿ ಡಾರ್ಲಿಂಗ್​​ ಕೃಷ್ಣ 33 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದರು. 36 ಎಸೆತಗಳಲ್ಲಿ 11 ಬೌಂಡರಿ 9 ಭರ್ಜರಿ ಸಿಕ್ಸರ್ ಸಹಿತ 111 ರನ್ ಗಳಿಸಿದರು. ನಂತರ ಬ್ಯಾಟಿಂಗ್ ಮಾಡಿದ ರಾಜೀವ್ 24 ಎಸೆತಗಳಲ್ಲಿ 37 ರನ್ ಗಳಿಸಿದರು.

ಕರ್ನಾಟಕ ಬುಲ್ಡೋಜರ್ಸ್ ಬ್ಯಾಟಿಂಗ್​​ ಬಳಿಕ ಅಂಗಳಕ್ಕೆ ಇಳಿದ ಮುಂಬೈ ಹೀರೋಸ್​ ತಂಡ ಮೊದಲ ಇನ್ನಿಂಗ್ಸ್‌ನ 10 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 100 ರನ್ ಗಳಿಸಿತು. ಈ ಮೂಲಕ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 71 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿತು. ಕರಣ್ ಆರ್ಯನ್ 3 ವಿಕೆಟ್ ಪಡೆದರೆ, ಕಾರ್ತಿಕ್ ಜಯರಾಮ್ 2 ವಿಕೆಟ್ ಪಡೆದುಕೊಂಡರು. ಸುನಿಲ್ ರಾವ್ ಮತ್ತು ಮಂಜುನಾಥ್ ಗೌಡ ತಲಾ 1 ವಿಕೆಟ್ ಪಡೆದರು.

199 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಹೀರೋಸ್ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡಿತು. 113 ರನ್ ಗಳಿಸುವ ಮೂಲಕ ಸೋಲನ್ನು ಒಪ್ಪಿಕೊಂಡಿತು. 85 ರನ್‌ಗಳ ಭರ್ಜರಿ ಗೆಲುವಿನ ಮೂಲಕ ಕರ್ನಾಟಕ ಬುಲ್ಡೋಜರ್ಸ್ ಅಂಕಪಟ್ಟಿಯಲ್ಲಿ  ಮೊದಲ ಸ್ಥಾನವನ್ನು ಪಡೆದುಕೊಂಡಿತು.

Author:

...
Editor

ManyaSoft Admin

Ads in Post
share
No Reviews