ಚಾಮರಾಜನಗರ :
ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನಡ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲೊಕ್ಕನಹಳ್ಳಿ ಗ್ರಾಮದ 12 ವರ್ಷದ ಬಾಲಕ ಪ್ರಜ್ವಲ್ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.
ಮೃತ ಬಾಲಕ ಪ್ರಜ್ವಲ್ ತನ್ನ ಸಂಬಂಧಿಕರ ಮಗುವಿನ ಜೊತೆ ಆಟವಾಡ್ತಾ ಇದ್ದಾಗ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿದೆ, ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ, ಆದರೆ ಇದರಿಂದ ಆತಂಕಗೊಂಡ ಬಾಲಕ ಮಗುವಿಗೆ ಏನಾಗುತ್ತೋ ಎಂಬ ಭಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅತನನ್ನು ಗಮನಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಬಾಲಕ ಮೃತಪಟ್ಟಿದ್ದಾನೆ
ಸದ್ಯ ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.