ಚಾಮರಾಜನಗರ:
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವ್ಯಾಪ್ತಿಯಲ್ಲಿರುವ ಮಹದೇಶ್ವರ ಮತ್ತು ಕಾವೇರಿ ವನ್ಯಧಾಮದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಮಾಸುವ ಮುನ್ನವೇ ಚಾಮರಾಜನಗರದಲ್ಲಿ ಮತ್ತೊಂದು ಬೆಂಕಿ ಅನಾಹುತ ನಡೆದಿದೆ. ಕಾವೇರಿ ವನ್ಯಧಾಮ ಹಾಗೂ ಮಹದೇಶ್ವರ ಬೆಟ್ಟದಲ್ಲಿ ನೂರಾರು ಎಕರೆ ಪ್ರದೇಶಗಳಲ್ಲಿ ಕಾಡಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹರಸಹಾಸ ಪಡುತ್ತಿದ್ದಾರೆ. ಬೆಂಕಿಗೆ ಕೆನ್ನಾಲಗೆಗೆ ನೂರಾರು ಎಕರೆ ಅರಣ್ಯ ಪ್ರದೇಶ ನಾಶವಾಗ್ತಿದೆ. ಬಿಸಿಲಿನ ವಾತಾವರಣ ಹೆಚ್ಚಿರುವ ಕಾರಣ ಬೆಂಕಿ ಬೇರೆ ಬೇರೆ ಒಣ ಪ್ರದೇಶಗಳಿಗೆ ವಿಸ್ತರಣೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಹೂಗ್ಯಂ, ಪಿಜಿ ಪಾಳ್ಯ ವಲಯಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ ನಾಲ್ಕನೇ ಬಾರಿಗೆ ನಡೆದಿದ್ದು. ಯಾರೋ ಕಿಡಿಗೇಡಿಗಳು ಬೇಕು ಎಂದೇ ದುರುದ್ದೇಶಪೂರ್ವವಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ.