Chamarajanagara : ಭೀಕರ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು..!

CHAMARAJANAGARA : ಚಾಮರಾಜನಗರ ಜಿಲ್ಲೆ ಧನಗೆರೆ ತಾಲ್ಲೂಕಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ನಿವಾಸಿ ಕಾರು ಚಾಲಕ ಮುರುಘ (30)  ಎಂಬುವರು ಮೃತ ದುರ್ದೈವಿಯಾಗಿದ್ದಾರೆ.

ಖಾಸಗಿ ಬಸ್‌ ಹಾಗೂ ಕಾರು ನಡುವೆ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದರೆ, ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲೆ ಮಾಡಿ ತನಿಖೆ ಆರಂಭಿಸಿದ್ದಾರೆ. ಅಪಘಾತದ ಇನ್ನಷ್ಟು ವಿವರಗಳನ್ನು ಪೊಲೀಸರು ತಿಳಿಸುವ ನಿರೀಕ್ಷೆಯಿದೆ.

 

Author:

...
Sushmitha N

Copy Editor

prajashakthi tv

share
No Reviews