ಚಿತ್ರದುರ್ಗ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು..!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿತ್ರದುರ್ಗ

ಚಿತ್ರದುರ್ಗ :

ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿಯ ಕೊಂಚರ ಮಾಳಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆಯು ಸ್ಥಳದಲ್ಲೇ ಸಾವನ್ನಪ್ಪಿದೆ. ಚಿರತೆಯು ನಸುಕಿನ ಜಾವ ಹೆದ್ದಾರಿ ದಾಟುವ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ. ರೈತರು ಜಮೀನಿನ ಹತ್ತಿರ ಹೋದಾಗ ಚಿರತೆ ಸಾವನ್ನಪ್ಪಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ, ಈ ಸಂಬಂಧ ತುರುವನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews