ಛತ್ತೀಸಗಢ : ಭೀಕರ ರಸ್ತೆ ಅಪಘಾತ | 13 ಜನರ ದಾರುಣ ಸಾವು

ಛತ್ತೀಸಗಢ :

ಟ್ರೇಲರ್ ಟ್ರಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ದಳದಲ್ಲಿಯೇ 13 ಜನರು ಸಾವನ್ನಪಿದ್ದು, 11 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್ಪುರದಲ್ಲಿ ನಡೆದಿದೆ.

ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದ ಬಜಾರ್ ರಸ್ತೆಯ ಸರಗಾಂವ್ ಬಳಿ ತಡರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಅಪಘಾತದಲ್ಲಿ 4 ಮಕ್ಕಳು ಮತ್ತು 9 ಮಹಿಳೆಯರು ಸಾವನ್ನಪ್ಪಿದ್ದಾರೆ. ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ತೆರಳಿತ್ತು. ಕಾರ್ಯಕ್ರಮ ಮುಗಿಸಿ ವಾಪಸ್‌ ತಡರಾತ್ರಿ ಟ್ರಕ್‌ ನಲ್ಲಿ ಹಿಂತಿರುಗುವಾಗ ಖರೋರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಸರಗಾಂವ್‌ ಬಳಿ ಟ್ರೇಲರ್‌ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಎಸ್‌ ಪಿ ಲಾಲ್‌ ಉಮೇದ್‌ ಸಿಂಗ್‌ ತಿಳಿಸಿದ್ದಾರೆ.

ಇನ್ನು ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಡಾ.ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Author:

...
Sushmitha N

Copy Editor

prajashakthi tv

share
No Reviews