ಚಿಕ್ಕಬಳ್ಳಾಪುರ : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ | ಕೊನೆ ಕ್ಷಣದಲ್ಲಿ ಕಾರ್ಯಕ್ರಮಗಳು ರದ್ದು

ಕಾರ್ಯಕ್ರಮಕ್ಕಾಗಿ ಸಿದ್ದತೆಗೊಂಡಿದ್ದ ವೇದಿಕೆ
ಕಾರ್ಯಕ್ರಮಕ್ಕಾಗಿ ಸಿದ್ದತೆಗೊಂಡಿದ್ದ ವೇದಿಕೆ
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ:

ಸಿಎಂ ಸಿದ್ದರಾಮಯ್ಯಗೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ ವೈದ್ಯರು ಸಿಎಂ ಸಿದ್ದರಾಮಯ್ಯಗೆ ಎರಡು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದು, ಹೊಸೂರಿನಲ್ಲಿ ಆಯೋಜನೆಗೊಂಡಿದ್ದ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ದಿಢೀರ್‌ ರದ್ದಾಗಿದೆ.

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಡಾ.ಹೆಚ್‌ ನರಸಿಂಹಯ್ಯ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಬೇಕಿತ್ತು.  ಕಾರ್ಯಕ್ರಮಕ್ಕಾಗಿ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಅಲ್ಲದೇ ಹೆಲಿಪ್ಯಾಡ್‌ನಲ್ಲಿ ಸಿಎಂ ಸಿದ್ದರಾಮಯ್ಯ ಭದ್ರತೆಗೆ ಪೊಲೀಸ್‌ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಆದರೆ ಮಂಡಿನೋವು ಹಿನ್ನೆಲೆ ಕೊನೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ದಿಢೀರ್‌ ರದ್ದಾಗಿದೆ. ಹೊಸೂರು ಬಳಿಯ ಹೆಲಿಪ್ಯಾಡ್ ನಲ್ಲಿ ಕಾದು ಕುಳಿತಿದ್ದ ಅಧಿಕಾರಿಗಳು ಹಾಗೂ ಪೊಲೀಸರು ವಾಪಸ್‌ ಆಗಿದ್ದಾರೆ.

Author:

share
No Reviews