ಚಿಕ್ಕಬಳ್ಳಾಪುರ : ತೆಂಗಿನ ಮರ ಬಿದ್ದು ಮಗು ಸಾವು | ತಾಯಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: 

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿ ಗ್ರಾಮದಲ್ಲಿ ತೆಂಗಿನ ಮರ ಬಿದ್ದ ಪರಿಣಾಮ ಪೃಥ್ವಿರಾಜ್ (3) ಎಂಬ ಮಗು ಮೃತಪಟ್ಟಿದೆ. ಹಾಗೂ ಘಟನೆಯಲ್ಲಿ ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು. ಅವರನ್ನು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ವೇಳೆ ಅವಘಡ ಸಂಭವಿಸಿ ಮಗು ಸಾವನ್ನಪ್ಪಿದ್ದು, ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.

ಇಂದು ಏಕಾಏಕಿ ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದೆ. ಪರಿಣಾಮ ಮಗು ಸಾವನ್ನಪ್ಪಿದರೆ. ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



 

Author:

share
No Reviews