ಚಿಕ್ಕಬಳ್ಳಾಪುರ :
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು. ಭಾರತ ಮತ್ತು ಪಾಕ್ ನಡುವೆ ಯುದ್ಧ ಏರ್ಪಟ್ಟಿತ್ತು. ಭಾರತದ ದಾಳಿಗೆ ತತ್ತರಿಸಿದ ಪಾಕ್ ಕದನ ವಿರಾಮಕ್ಕೆ ಬೇಡಿಕೆಯಿಟ್ಟಿತ್ತು. ಅದರಂತೆ ಎರಡು ದೇಶಗಳು ಕದನ ವಿರಾಮ ಓಕೆ ಅಂದಿದ್ದವು. ಇನ್ನು ಯುದ್ದದ ಸಂದರ್ಭದಲ್ಲಿ ಸಾರ್ವಜನಿಕರು ಯಾವ ರೀತಿಯಾಗಿ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಕುರಿತು ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲಾಯ್ತು. ಅದರಂತೆ ಚಿಕ್ಕಬಳ್ಳಾಪುರದಲ್ಲಿಯೂ ಕೂಡ ಜಿಲ್ಲಾಡಳಿತದ ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮಾಕ್ ಡ್ರಿಲ್ ಮಾಡಲಾಯಿತು. ಮಾಕ್ ಡ್ರಿಲ್‌ನಲ್ಲಿ ಭಯೋತ್ಪಾದಕರು ದಾಳಿ ಮಾಡುವ ಸನ್ನಿವೇಶಗಳ ಬಗ್ಗೆ ಅಣಕು ಪ್ರದರ್ಶನ ನಡೆಸಲಾಯಿತು. ಯುದ್ದದ ಸಂದರ್ಭದ್ಲಲಿ ಪೈಯರ್ ಎಂಜಿನ್ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳ ಹಾಗೂ ಆರೋಗ್ಯ ಇಲಾಖೆ ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಹಾಗೂ ರಕ್ಷಣಾ ಕಾರ್ಯ ಹೇಗೆ ನಡೆಯುತ್ತೆ ಎಂಬುದುನ್ನು ಸಾರ್ವಜನಿಕವಾಗಿ ಅಣಕು ಪ್ರದರ್ಶನ ಮಾಡಿದರು.
ಇನ್ನು ರಕ್ಷಣಾ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ಮಾಕ್ ಡ್ರಿಲ್ ನಡೆಸಲಾಯಿತು, ಮಾಕ್ ಡ್ರಿಲ್ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಜಿಲ್ಲಾಧಿಕಾರಿ, ಎಸ್ಪಿ ,ಸಿಇಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಇದೇ ವೇಳೆ ಅಧಿಕಾರಿಗಳು ಯುದ್ಧದ ಸಂದರ್ಭದಲ್ಲಿ ಜನರು ಹೇಗೆ ತಮ್ಮನ್ನು ರಕ್ಷಿಸಿಕೊಳ್ಳಬೇಕು ಎಂಬುದರ ಕುರಿತು ಜನರಿಗೆ ಮಾಹಿತಿ ನೀಡಿದರು.