ಚಿಕ್ಕಬಳ್ಳಾಪುರ : ಟ್ರಾನ್ಸ್ ಫಾರ್ಮರ್‌ ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ :

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ KPTCL ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿ ಶವ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಹೌದು ನಗರದ KPTCL ಕಚೇರಿ ಆವರಣದಲ್ಲಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾನ್ಸ್‌ಫಾರ್ಮರ್‌ಗೆ ಸಿಲುಕಿಕೊಂಡಿದ್ದು, ವ್ಯಕ್ತಿಯ ದೇಹ ಸುಟ್ಟು ಕರಕಲಾಗಿದೆ.

ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿ ಯಾರು ಇಲ್ಲದಿರೋದರಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಘಟನೆ ನಡೆದು ಕೆಲ ಸಮಯದ ಬಳಿಕ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವನ್ನಪ್ಪಿರೋ ವ್ಯಕ್ತಿ ಯಾರು, ವಿಳಾಸ ಸದ್ಯಕ್ಕೆ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವ್ಯಕ್ತಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Author:

share
No Reviews