ಚಿಕ್ಕಬಳ್ಳಾಪುರ : ಕೊಳವೆ ಬಾವಿಗಳ ಕೊರೆಸುವ ಯೋಜನೆಗೆ ಶಂಕುಸ್ಥಾಪನೆ

ಚಿಕ್ಕಬಳ್ಳಾಪುರ :

ರಾಜ್ಯದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಚಿಕ್ಕಬಳ್ಳಾಪುರ ಕೂಡ ಒಂದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರದಲ್ಲಿ ಜನಸಂಖ್ಯೆಯ ಜೊತೆಗೆ ಜೀವನ ವೆಚ್ಚವೂ ದಿನೇ ದಿನೇ ಏರುತ್ತಿದೆ. ಈ ಹಿನ್ನೆಲೆಯಲ್ಲಿ, ನಗರದ ವಾಸಿಗಳಿಗೆ ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯವನ್ನು ಒದಗಿಸಲು ನಗರಸಭೆ ಕೊಳವೆ ಬಾವಿಗಳನ್ನು ಕೊರೆಸುವ ಯೋಜನೆಯನ್ನು ರೂಪಿಸಿದೆ. ಅದರಂತೆ 5 ನೇ ವಾರ್ಡಿನ ತಿಮ್ಮಕ್ಕ ಬಡಾವಣೆಯಲ್ಲಿ ಕೊಳವೆ ಬಾವಿ ಕೊರೆಯುವ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಯಿತು.

ಪ್ರಸ್ತುತ ಜಕ್ಕಲಮಡಗು ಜಲಾಶಯದಿಂದ ನಗರಕ್ಕೆ ನೀರು ಪೂರೈಕೆಯಾಗುತ್ತಿದೆ. ಈ ವರ್ಷ ಜಲಾಶಯವು ಸಂಪೂರ್ಣವಾಗಿ ತುಂಬಿರುವುದರಿಂದ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗಿಲ್ಲ. ಆದರೆ, ಕೆಲವು ಪ್ರದೇಶಗಳಲ್ಲಿ ಜಲಾಶಯದ ನೀರನ್ನು ಸರಬರಾಜು ಮಾಡಲು ಪೈಪ್‌ಲೈನ್ ಸಂಪರ್ಕವಿಲ್ಲ, ಇದರಿಂದ ನಾಗರಿಕರು ಕೊಳವೆ ಬಾವಿಗಳನ್ನೇ ಅವಲಂಬಿಸಿದ್ದಾರೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗದಿರುವುದರಿಂದ ಕೊಳವೆ ಬಾವಿಗಳೂ ನೀರಿಲ್ಲದೆ ಕೈಕೊಡುವ ಸಾಧ್ಯತೆ ಇದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಚಿಕ್ಕಬಳ್ಳಾಪುರ ನಗರಸಭೆಯು ಪೂರ್ವಯೋಜಿತವಾಗಿ ಕೊಳವೆ ಬಾವಿಗಳನ್ನು ಕೊರೆಸುವ ಕಾರ್ಯಕ್ಕೆ ಮುಂದಾಗಿದೆ.

5ನೇ ವಾರ್ಡಿನ ಸದಸ್ಯ ಹಾಗೂ ನಗರಸಭೆಯ ಉಪಾಧ್ಯಕ್ಷರಾದ ನಾಗರಾಜ್ ಕೊಳವೆ ಬಾವಿ ಕೊರೆಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಇವರು ನಮ್ಮ 5ನೇ ವಾರ್ಡಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕಾಗಿ ನಡೆಯುತ್ತಿವೆ. ಸಿಸಿ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಮತ್ತು ಕುಡಿಯುವ ನೀರಿನ ವ್ಯವಸ್ಥೆಯಂತಹ ಮೂಲ ಸೌಕರ್ಯಗಳನ್ನು ನಾಗರಿಕರಿಗೆ ಒದಗಿಸಲಾಗಿದೆ ಎಂದರು.

Author:

...
Sushmitha N

Copy Editor

prajashakthi tv

share
No Reviews