ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು..!

ಚಿಕ್ಕಬಳ್ಳಾಪುರ:

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.

ಮೃತರನ್ನು ನೇಪಾಳ ಮೂಲದ ಸುನೀಲ್‌ ಬಿಸ್ತೂರಿ ಹಾಗೂ ಕುಜಲ್‌ ಭಂಡಾರಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ವಾಸವಿದ್ದರು, ಶಿವರಾತ್ರಿ ಹಬ್ಬದ ಪ್ರಯುಕ್ತ ಈ ಯುವಕರು ಚಿಕ್ಕಬಳ್ಳಾಪುರ ಜಿಲ್ಲೆಯ ಈಶಾ ಆದಿಯೋಗಿ ದರ್ಶನಕ್ಕೆ ಬಂದಿದ್ದರು, ಈ ವೇಳೆ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯ PSI ಮಂಜುಳಾ  ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 


 

Author:

share
No Reviews