ಚಿಕ್ಕಬಳ್ಳಾಪುರ :
ಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಇನ್ನು ಮೃತ ಮಹಿಳೆಯು ಸುಮಾರು 30ರಿಂದ 40 ವರ್ಷದ ಒಳಗಿನ ಮಹಿಳೆ ಎಂದು ತಿಳಿದು ಬಂದಿದೆ. ನಗರದ ಕನ್ನಡ ಭವನ ಹಾಗೂ ಶನಿಮಹಾತ್ಮ ದೇವಸ್ಥಾನ ಪಕ್ಕದಲ್ಲಿ ಇರುವ ಕಲ್ಯಾಣಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಇನ್ನೂ ಮಾಹಿತಿ ತಿಳಿಯುತ್ತಿದಂತೆ ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಮಹಿಳೆಯ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇನ್ನೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಿ ಪರಿಶೀಲನೆ ನಡೆಸಲಾಗುವುದೆಂದು ಮಾದ್ಯಮದವರಿಗೆ ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಇನ್ನು ಈ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.