CHIKKABALLAPURA : ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿಯಲ್ಲಿ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ಕಾಲೋನಿ ನಿವಾಸಿ ಶ್ರೀಕಾಂತ್ (29) ಎಂಬುವರು ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಶ್ರೀಕಾಂತ್ ಮನೆಗೆ ತೆರಳುತ್ತಿದ್ದ ಸಂದರ್ಭ ದುಷ್ಕರ್ಮಿಗಳಿಂದ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಶ್ವಾನದಳ ಮತ್ತು ಫರೆನ್ಸಿಕ್ ತಂಡ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಲಾಯ್ತು. ಈ ಕುರಿತು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹತ್ಯೆಗೆ ಕಾರಣವೇನೆಂಬುದು ಇನ್ನೂ ಬಹಿರಂಗವಾಗಿಲ್ಲದಿದ್ದರೂ, ವೈಯಕ್ತಿಕ ವೈಷಮ್ಯವೆಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಪತ್ತೆಗಾಗಿ ಬಲೆ ಬೀಸಿದ್ದಾರೆ.