ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿ ಚಿರತೆ ಸಾವು..!

ಚಿರತೆಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದು.
ಚಿರತೆಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದು.
ಚಿಕ್ಕಮಗಳೂರು

ಚಿಕ್ಕಮಗಳೂರು:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದಲ್ಲಿರುವ ಕಾಫೀ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ.

ಕಾಡುಹಂದಿ ಬೇಟೆಗಾಗಿ ಬೇಟೆಗಾರರು ಹಾಕಿದ್ದ ಉರುಳಿಗೆ ನೆನ್ನೆ ರಾತ್ರಿ ಚಿರತೆಯೊಂದು ಸಿಲುಕಿದ್ದು. ಇಂದು ಬೆಳಿಗ್ಗೆ ಬಿದ್ದು ನರಳಾಡುತ್ತಿದ್ದ ಚಿರತೆಯನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ, ಅರಣ್ಯ ಇಲಾಖೆಯ ಆದಿಕಾರಿಗಳು ಕೂಡಲೇ ಬಂದು ಚಿರತೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ, ಹಾಗೂ ಘಟನಾ ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾಗಿದ್ದಾರೆ. ಅಷ್ಟರಲ್ಲಿ ಚಿರತೆ ಮೃತಪಟ್ಟಿದ್ದು, ಚಿರತೆಯ ದೇಹದಲ್ಲಿ ಸಿಲುಕಿದ್ದ ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಚಿರತೆ ಸೊಂಟಕ್ಕೆ ಇಳಿದಿದ್ದ ಉರುಳು ಬಿಗಿಯಾಗಿ ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.

ತೋಟದಲ್ಲಿ ಬೇಟೆಗಾರರು ಕಾಡುಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದ್ದು, ಸಸ್ಯ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಕಾಫಿ ತೋಟದ ಮಾಲೀಕರ ವಿರುದ್ದ ಎಫ್‌ ಐ ಆರ್ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಬಗ್ಗೆ ತನಿಖೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Author:

...
Editor

ManyaSoft Admin

Ads in Post
share
No Reviews