ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹೆಚ್ಚಾಗ್ತಿದೆ ಮಂಗನ ಕಾಯಿಲೆ ಭೀತಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು

ಚಿಕ್ಕಮಗಳೂರು: 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನದಲ್ಲಿ ನಾಲ್ಕು ಜನರಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ.

ನರಸಿಂಹರಾಜಪುರ ಮಾತ್ತು ಕೊಪ್ಪ ತಾಲೂಕಿನಲ್ಲಿ ಒಟ್ಟು ನಾಲ್ಕು ಮಂದಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ 20 ಪ್ರಕರಣಗಳು ದಾಖಲಾಗಿವೆ. 11 ಜನರು ಈಗಾಗಲೇ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಇನ್ನು 9 ಪ್ರಕರಣಗಳು ಸಕ್ರಿಯವಾಗಿವೆ.

ಜಿಲ್ಲೆಯಲ್ಲಿ ಬೇಸಿಗೆ ಸಮಯ ಮಂಗನ ಕಾಯಿಲೆ ಅಧಿಕಗೊಳ್ಳುವ ಸಾಧ್ಯತೆಯಿದ್ದು, ಕಾಡಿಗೆ ಹೋದಾಗ ಜನರು ಎಚ್ಚರದಿಂದಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ಒಟ್ಟು 494 ಜನರ ರಕ್ತವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. 3 ಮಂಗಗಳು ಸಾವನ್ನಪ್ಪಿವೆ. ಆರಂಭದಲ್ಲಿ ಕೆ.ಎಫ್.ಡಿ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿತು, ಬಳಿಕ ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. NR ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ KFD ಕಾಣಿಸಿಕೊಂಡಿತ್ತು.

ಒಟ್ಟಿನಲ್ಲಿ ಕಳೆದ ವರ್ಷ 130ಕ್ಕೂ ಅಧಿಕ ಜನರಲ್ಲಿ ಹರಡಿದ್ದ KFD ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಂದಿರುವುದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ ಈಗಾಗಿಯೇ ಅರೋಗ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು ಜನರಲ್ಲಿ ಅರಿವು ಮೂಡಿಸುವ ಕೆಲಸ ಕೂಡ ಮಾಡ್ತಿದೆ.
 

 

Author:

...
Editor

ManyaSoft Admin

Ads in Post
share
No Reviews