ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಪ್ರೇಮಿಗಳ ಶವ ಪತ್ತೆ | ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

ಚಿಕ್ಕಮಗಳೂರು: 

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿರುವ ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ತಾಲೂಕಿನ ಪೂರ್ಣಿಮಾ, ಭದ್ರಾವತಿಯ ಮಧು ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಫಿ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಚಿಕ್ಕಮಗಳೂರು ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ, ಘಟನಾ ಸ್ಥಳಕ್ಕೆ ಚಿಕ್ಕಮಗಳೂರಿನ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author:

...
Editor

ManyaSoft Admin

Ads in Post
share
No Reviews