ಚಿಕ್ಕನಾಯಕನಹಳ್ಳಿ : ನೂರು ಕ್ರೇಟ್ ಸೀಬೆಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆಲದ ಕಟ್ಟೆ ಬಳಿ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ನೂರು ಕ್ರೇಟ್ ಸೀಬೆಹಣ್ಣು ತುಂಬಿಕೊಂಡು ಚಿಕ್ಕನಾಯಕನಹಳ್ಳಿಯಿಂದ ಹುಳಿಯಾರಿನ ಕಡೆಗೆ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. ಇನ್ನು ಅಲ್ಲಿಗೆ ಬಂದ ಜನರು ಲಾರಿಯಲ್ಲಿದ್ದ ವ್ಯಕ್ತಿಗೆ ಏನಾಗಿದೆ ಅನ್ನೋದನ್ನ ನೋಡೋದು ಬಿಟ್ಟು ನೆಲದ ಮೇಲೆ ಬಿದ್ದಿದ್ದ ಸೀಬೆ ಹಣ್ಣುಗಳನ್ನು ಚೀಲಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ಈ ಅಪಘಾತಕ್ಕೆ ಕಳಪೆ ರಸ್ತೆ ಕಾಮಗಾರಿಯೇ ಪ್ರಮುಖ ಕಾರಣವೆಂದು ಸ್ಥಳೀಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ತಿಂಗಳಿಗೆ ಕನಿಷ್ಠ ನಾಲ್ಕು ಅಪಘಾತಗಳು ಈ ಭಾಗದಲ್ಲಿ ಸಂಭವಿಸುತ್ತಿವೆ ಎಂದು ಅಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಿ ರಸ್ತೆ ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.