ಚಿಕ್ಕನಾಯಕನಹಳ್ಳಿ:
ಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್, ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ತಾಲೂಕಿನ ಭೈರಾಪುರದ ಜಯರಾಂ ಎಂಬುವವರ ಮಗ ರಾಹುಲ್, ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9.30 ರ ಸಮಯದಲ್ಲಿ ಓದುತ್ತಿರುವಾಗ ಎದೆ ನೋವು ಕಾನಿಸಿಕೊಂಡು ಕುಸಿದು ಬಿದ್ದಿದ್ದಾನೆ, ತಕ್ಷಣವೇ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೇ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಎಸ್ ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಹಾಗೂ ಸಹಶಿಕ್ಷಕರು ಸೇರಿದಂತೆ ಶಾಲಾ ಸಿಬ್ಬಂದಿವರ್ಗದವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಸಾವಿಗೆ ಕಂಬನಿ ಮಿಡಿದಿದ್ದಾರೆ.