BANGALORE : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

BANGALORE STAMPEDE CASE : CHINNASWAMI STADIUM ಬಳಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ [STAMPEDE] ನೈತಿಕ ಹೊಣೆಯುತ್ತು ಕರ್ನಾಟಕ ರಾಜ್ಯ ಕ್ರಿಕೆಟ್​ ಅಸೋಸಿಯೇಶನ್​ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ [RESIGNATION] ನೀಡಿದ್ದಾರೆ. ಕೆಎಸ್​ಸಿಎ [KSCA] ಕಾರ್ಯದರ್ಶಿ ಮತ್ತು ಖಜಾಂಜಿ [TREASURER] ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಜೂನ್​ 4ರಂದು ಸಂಭವಿಸಿದ ಕಾಲ್ತುಳಿತ ದುರಂತಕ್ಕೆ RCB MARKETING HEAD​ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು. ಇದೀಗ KSCA ನ ಇಬ್ಬರು ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

KSCA ಕಾರ್ಯದರ್ಶಿ ಎ. ಶಂಕರ್‌, [ SHANKAR] ಖಜಾಂಚಿ ಜೈರಾಮ್‌ [JAI RAM] ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ ಕಾಲ್ತುಳಿತ ಪ್ರಕರಣ ಸಂಬಂಧ ನೆನ್ನೆ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ RCB ಆಡಳಿತ ಮಂಡಳಿ, DNA EVENT MANAGEMENT ಸಂಸ್ಥೆ ಹಾಗೂ KSCA ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. 

CM ಸೂಚನೆ ಬೆನ್ನಲ್ಲೇ ಇಂದು KSCA ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ RCB MANAGEMENT ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Author:

...
Keerthana J

Copy Editor

prajashakthi tv

share
No Reviews