ಚಿತ್ರದುರ್ಗ :
ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ನಡೆದಿದೆ.
ಯಾದಗಿರಿ ಮೂಲದ ಮೌಲಾ (35) ಮತ್ತು ರೆಹಮಾನ್ (15) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.