ಚಿತ್ರದುರ್ಗ :
ಚಲಿಸುತ್ತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಲಾರಿಗೆ ಅತೀ ವೇಗವಾಗಿ ಚಲಿಸುತ್ತಿದ್ದಂತಹ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (50), ವಿದ್ಯಾರಣ್ಯಪುರದ ರುದ್ರಸ್ವಾಮಿ (52) ಮಲ್ಲಿಕಾರ್ಜುನ (50) ಸೇರಿದಂತೆ ಮತ್ತಿಬ್ಬರು ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.