ಚಿತ್ರದುರ್ಗ :
ಕಾರಿನ ಟೈರ್ ಸ್ಪೋಟಗೊಂಡು ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ನಡೆದಿದೆ. ತಮಿಳುನಾಡು ಮೂಲದ ಅರ್ಜುನ್ (28) ಶರವಣ (31) ಹಾಗೂ 29 ವರ್ಷದ ಸೇಂದಿಲ್ ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.
ಪ್ರವಾಸಕ್ಕೆಂದು ಇನ್ನೋವಾ ಕಾರಿನಲ್ಲಿ ಗೋವಾಗೆ ತೆರಳುತ್ತಿದ್ದಾಗ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಇನ್ನು ಅಪಘಾತದಲ್ಲಿ ಸಲ್ಮಾನ್, ನವೀನ್ ಗೋಕುಲ್ ಸೆಂತಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂಬುವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಸದ್ಯ ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.