ಚಿತ್ರದುರ್ಗ :
ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆಯುತ್ತಲೇ ಇದೆ. ಹೌದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಕಳ್ಳಿಹಟ್ಟಿಯ ನಿವಾಸಿ 25 ವರ್ಷದ ಶಾಂತಮ್ಮ ಎಂಬ ಮಹಿಳೆ ಮೃತದುರ್ದೈವಿಯಾಗಿದ್ದಾರೆ. ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನನವಾಗಿದ್ದು, ಶಾಂತಮ್ಮಗೆ 15 ದಿನಗಳಿಂದ ಚಿಕಿತ್ಸೆ ನೀಡಲಾಗ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸ್ತಾ ಇದ್ದು, ಆಸ್ಪತ್ರೆ ಮುಂದೆ ಕುಟುಂಬಸ್ಥರು ಪ್ರತಿಭಟನೆಯನ್ನು ನಡೆಸಿದ್ದಾರೆ.