RAYCHUR: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ಹಿನ್ನೆಲೆ, ನಾಳೆ (ಜೂನ್ 9) ರಾಯಚೂರಿನಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
ನಾಳೆ ರಾಯಚೂರಿನ ವಾಲ್ ಕಾಟ್ ಮೈದಾನದಲ್ಲಿ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಲ್ಲದೇ ಈ ವೇಳೆಯೇ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಸಮಾರಂಭ, ಮುಂಗಾರು ಉತ್ಸವ ಸೇರಿದಂತೆ ವಿವಿಧ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಬೇಕಾಗಿತ್ತು. ಅದರೆ ಬೆಂಗಳೂರಿನಲ್ಲಿ ನಡೆದಂತಹ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ದತೆಗಳನ್ನು ರದ್ದುಪಡಿಸಲಾಗಿದೆ.
ಇನ್ನು ಈ ಎಲ್ಲಾ ಕಾರ್ಯಕ್ರಮಗಳು ಮುಂದಿನ ದಿನಾಂಕಕ್ಕೆ ಮುಂದೂಡಲ್ಪಡುವ ಸಾಧ್ಯತೆ ಇದೆ.