TUMAKURU : ಕಲ್ಪತರು ನಾಡಿನಲ್ಲಿ ಹೆಚ್ಚಿದ ಕರೊನಾ ಆತಂಕ | ಶಾಲೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

TUMAKURU NEWS : ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಎಂಬಂತೆ ಮತ್ತೆ ರಾಜ್ಯದಲ್ಲಿ ಕೋವಿಡ್‌ ವಕ್ಕರಿಸಿಕೊಂಡಿದೆ. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಲಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ತುಮಕೂರು ಜಿಲ್ಲೆಯಲ್ಲಿ  14 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು  ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಶಾಲೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ.

ರಾಜ್ಯದಲ್ಲಿ ಬೇಸಿಗೆ ರಜೆ ಮುಕ್ತಾಯವಾಗಿ ಮೇ 29ರಿಂದ ಶಾಲೆಗಳು ಆರಂಭವಾಗಿವೆ. ಇದೀಗ ಕರೊನಾ ಕಾಟ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ್ಯಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೈ ಅಲರ್ಟ್​ ಆಗಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಕೊರೊನಾ ಪಾಸಿಟಿವ್​ ಬರುವವರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಸ್‌ಗೆ ತುಮಕೂರಿನಲ್ಲೂ ಒಬ್ಬ  ಬಲಿ ಬಲಿಯಾಗಿದ್ದು . ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಕೂಡ ಎಚ್ಚೆತ್ತುಕೊಂಡಿದೆ.

ಮಕ್ಕಳ ಹಾಗೂ ಶಾಲಾ ಸಿಬ್ಬಂದಿ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಸುತ್ತೋಲೆಯನ್ನು ಜಾರಿಗೆ ತರಲಾಗಿದೆ. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಶಾಲೆಗಳಿಗೆ ಸೂಚಿಸಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಅಥವಾ ಇತರ ಸೋಂಕಿನ ಲಕ್ಷಣಗಳು ಕಂಡುಬಂದರೆ, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂಬುದಾಗಿ ಸೂಚಿಸಲಾಗಿದೆ. ಈ ರೀತಿಯ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರ ಸಲಹೆ ಪಡೆಯಬೇಕು ಮತ್ತು ಮಕ್ಕಳನ್ನು ಸಂಪೂರ್ಣವಾಗಿ ಗುಣಮುಖ ಮಾಡಿದ ಬಳಿಕ ಮಾತ್ರ ಶಾಲೆಗೆ ಕಳುಹಿಸಬೇಕು. ಶಾಲೆಯಲ್ಲಿ ಇದ್ದಾಗ ಮಕ್ಕಳಲ್ಲಿ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ, ಶಾಲಾ ಆಡಳಿತವು ಪೋಷಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಮನೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಒಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿಯೂ ಕರೊನಾ ಆತಂಕ ಹೆಚ್ಚಾಗ್ತಿದ್ದು, ಇದೀಗ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಹೊಸ ಮಾರ್ಗಸೂಚಿಗಳನ್ನ ಹೊರಡಿಸಲಾಗಿದೆ.

 

Author:

...
Keerthana J

Copy Editor

prajashakthi tv

share
No Reviews