CHAMPIONS TROPHY 2025: ಇಂದು ಇಂಡಿಯಾ V/S ಪಾಕಿಸ್ಥಾನ್ ಪಂದ್ಯಕ್ಕೆ ಕೌಂಟ್ಡೌನ್ ಶುರು

ಇಂದು ಇಂಡಿಯಾ V/S ಪಾಕಿಸ್ಥಾನ್ ಪಂದ್ಯ
ಇಂದು ಇಂಡಿಯಾ V/S ಪಾಕಿಸ್ಥಾನ್ ಪಂದ್ಯ
ಕ್ರಿಕೆಟ್‌

 

ಇಂಡಿಯಾ V/S ಪಾಕಿಸ್ಥಾನ್‌ ಪಂದ್ಯಕ್ಕೆ ಕೌಂಟ್​ಡೌನ್ ಶುರುವಾಗಿದೆ. ದುಬೈನಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯ ನೋಡೋಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಇದು ಕೇವಲ ಬದ್ಧವೈರಿಗಳ ಪಂದ್ಯವಲ್ಲ. ಎರಡು ದೇಶಗಳ ಪ್ರತಿಷ್ಟೆಯ ಕದನ. ದುಬೈ ಮೈದಾನದಲ್ಲಿ ಪಾಕ್​ನ ಚಿಂದಿ ಉಡಾಯಿಸಿ ಭಾರತ ಗೆದ್ದು ವಿಜಯ ಪತಾಕೆ ಹಾರಿಸಲಿ ಅನ್ನೋದು ಪ್ರತಿಯೊಬ್ಬ ಭಾರತೀಯನ ಪ್ರಾರ್ಥನೆಯಾಗಿದೆ. ಬಹು ನಿರೀಕ್ಷಿತ ಇಂಡಿಯಾ ಪಾಕಿಸ್ಥಾನ್‌ ​ ಫೈಟ್​ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ.

ಇಂದು ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಈ ಹಿನ್ನೆಲೆ ದೇಶದ ಹಲವೆಡೆ ಕ್ರಿಕೆಟ್ ಅಭಿಮಾನಿಗಳು ಭಾರತದ ಗೆಲುವಿಗಾಗಿ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲೂ ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಚಾಂಪಿಯನ್ಸ್​ ಟ್ರೋಫಿಯ ಮೊದಲ ಪಂದ್ಯ ಗೆದ್ದು ಟೀಮ್​ ಇಂಡಿಯಾ ಆತ್ಮವಿಶ್ವಾಸದ ಅಲೆಯಲ್ಲಿದೆ. ಆದ್ರೆ, ಪಾಕ್​​ ಮೊದಲ ಪಂದ್ಯ ಸೋತು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಭಾರತ ಮತ್ತು ಪಾಕಿಸ್ಥಾನ್‌ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ ಹೆಚ್ಚಿನ ಪಂದ್ಯಗಳು ಪಾಕಿಸ್ಥಾನ್‌ ತಂಡವೇ ಗೆದ್ದಿದೆ. ಅದರಲ್ಲೂ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲೂ ಭಾರತದ ವಿರುದ್ಧ ಪಾಕಿಸ್ಥಾನ್‌ ಪಡೆ ಹಿಚ್ಚಿನ ಮ್ಯಾಚ್‌ಗಳಲ್ಲಿ ಜಯ ಸಾಧಿಸಿದೆ. ಇಂಡಿಯಾ ಪಾಕಿಸ್ಥಾನ್‌  ಪಂದ್ಯವು ಭಾರತೀಯ  ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ 2 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ ತಂಡದಲ್ಲಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ ಆಡಲಿದ್ದಾರೆ.

ಪಾಕಿಸ್ಥಾನ್‌ ತಂಡದಲ್ಲಿ ಮೊಹಮ್ಮದ್ ರಿಝ್ವಾನ್, ಬಾಬರ್ ಆಝಂ, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಇಮಾಮ್ ಉಲ್ ಹಕ್ ಆಡಲಿದ್ಧಾರೆ.

 

 

 

Author:

...
Editor

ManyaSoft Admin

Ads in Post
share
No Reviews