ದೇಶ : ಆಪರೇಷನ್ ಸಿಂಧೂರ್ | ಬೆಂಗಳೂರಲ್ಲಿ 29 ಪ್ಲೈಟ್ ರದ್ದು...!

ದೇಶ :

ಭಾರತದ ಸೇನೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ ಉಗ್ರರ 9 ಅಡಗು ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿತ್ತು. ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಾಡಿದ ದಾಳಿಯು ಉಗ್ರಹ ಅಟ್ಟಹಾಸಕ್ಕೆ ಪ್ರತ್ಯುತ್ತರ ನೀಡಿತ್ತು. ಕಾಶ್ಮೀರದಲ್ಲಿ ನಡೆದ ವೈಮಾನಿಕ ದಾಳಿ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಬುಧವಾರ ಮುಂಜಾನೆ ಉಗ್ರರ ಅಡಗು ತಾಣಗಳ ಮೇಲೆ ಭಾರತ ಸೇನೆ ಮಿಸೈಲ್‌ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 70 ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದರು. ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಅಡಗು ತಾಣ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಇದರ ಬೆನ್ನಲೆ ದೇಶದೆಲ್ಲೆಡೆ ಮುನ್ನೆಚ್ಚರಿಕಾ ಕ್ರಮವಾಗಿ 18 ರಾಜ್ಯಗಳಲ್ಲಿನ 200 ವಿಮಾನಗಳ ಹಾರಾಟ ನಿಷೇಸಿತ್ತು.

ಕೆಲ ವಾಯುಯಾನ ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಇರುವುದರಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 29 ವಿಮಾನಗಳ ಹಾರಾಟ ರದ್ದಾಗಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ 10 ವಿಮಾನಗಳ ಆಗಮನ 9 ನಿರ್ಗಮನ, ಏರ್ ಇಂಡಿಯಾ ಎಕ್ಸ್ ಪ್ರೆಸ್​​ನ 3 ಆಗಮನ 3 ನಿರ್ಗಮನ ಮತ್ತು ಏರ್ ಇಂಡಿಯಾದ 2 ಆಗಮನ 2 ನಿರ್ಗಮನ ವಿಮಾನಗಳ ಹಾರಾಟ ರದ್ದುಗೊಂಡಿದೆ.

'ಕೆಲ ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದೆ. ಇದು ನಮ್ಮ ಸಂಪರ್ಕ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ, ಪರಿಶೀಲಿಸಿಕೊಳ್ಳಬೇಕು'' ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

Author:

...
Sushmitha N

Copy Editor

prajashakthi tv

share
No Reviews