ದೇಶ :
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಕೃತ್ಯ ಖಂಡಿಸಿ, ಪಾಕ್ ಉಗ್ರರ ವಿರುದ್ಧ ಪ್ರಧಾನಿ ಮೋದಿ ತೊಡೆ ತಟ್ಟಿದ್ದಾರೆ. ಬುಧವಾರ ಮುಂಜಾನೆ ಸೈನ್ಯ ಕ್ಷಿಪಣಿ ದಾಳಿ ಮಾಡಿ 9 ಅಡಗು ತಾಣಗಳನ್ನು ಧ್ವಂಸ ಮಾಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಗುರುತಿಸಿ ದಾಳಿ ನಡೆಸಲಾಗಿದೆ. ಇಂತಹ ಸಮಯದಲ್ಲಿ ಫ್ಲೈಟ್‌ಗಳ ಹಾರಾಟ ಸ್ವಲ್ಪ ಕಷ್ಟವೇ ಸರೀ.
ಭಾರತ ಮಿಲಿಟರಿ ಪಡೆ ಪಾಕ್ ಮೇಲೆ ಕ್ಷಿಪಣಿ ದಾಳಿ ನಡೆಸಿ ಉಗ್ರರ ಅಟ್ಟಹಾಸಕ್ಕೆ ಪ್ರತ್ಯುತ್ತರ ಕೊಟ್ಟಿದೆ. ದೇಶದ ಆಪರೇಷನ್ ಸಿಂಧೂರ್ ಸಕ್ಸಸ್ ಕಂಡಿದೆ. ಆದರೆ ಇಂತಹ ಪರಿಸ್ಥಿತಿಯಲ್ಲಿ ಪ್ರಯಾಣಿಸುವುದು ಅತ್ಯಂತ ಅಪಾಯಕಾರಿ. ಆ ಕಾರಣಕ್ಕೆ ಕೇಂದ್ರ ಸರ್ಕಾರ ದೇಶದಲ್ಲಿನ ಒಟ್ಟು 18 ರಾಜ್ಯಗಳಲ್ಲಿ 200 ಏರ್ ಪೋರ್ಟ್‌ಗಳನ್ನು ಬಂದ್ ಮಾಡಿದೆ. ಇನ್ನು ಮೇ 10 ರವರೆಗೆ ಏರ್ ಪೋರ್ಟ್ ಬಂದ್ ಮಾಡಿ ಆದೇಶ ಹೊರಡಿಸಿದೆ.
ಇನ್ನು ದೇಶ ಪ್ರತಿಷ್ಠಿತ ವಿಮಾನ ಸಂಸ್ಥೆಗಳಾದ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸೇವೆಗಳನ್ನು ತಾತ್ಕಾಲಿವಾಗಿ ರದ್ದು ಮಾಡಿದೆ. ಶ್ರೀನಗರ, ಲೇಹ್, ಜಮ್ಮು, ಅಮೃತಸರ್, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಮೂಲಗಳ ಪ್ರಕಾರ, ಈ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಸೇವೆ ರದ್ದಾಗಿದೆ.
ಇನ್ನು ಮೇ 10ರವರೆಗೆ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ್, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಏರ್ ಇಂಡಿಯಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.