Cricket : ಭಾರತ ತಂಡದಲ್ಲಿ ಕಣಕ್ಕಿಳಿಯಲು ಸಜ್ಜಾದ ಮತ್ತೋಬ್ಬ ಆಟಗಾರ

ಭಾನುವಾರ ದುಬೈ ನಲ್ಲಿ ಚಾಂಪಿಯನ್ಸ್‌ ಟ್ರೋಫಿ 2025 ರ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ದ ಭಾರತ ಸೆಣೆಸಾಡಲಿದೆ. ಹೀಗಾಗಿ ಭಾರತ ತಂಡವು ನ್ಯೂಜಿಲೆಂಡ್‌ ಮಣಿಸಲು ಕಠಿಣ ಅಭ್ಯಾಸವನ್ನು ನಡೆಸುತ್ತಿದೆ.

ಶಮಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ, ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಅವರು ಕೆಲ ಸಮಯ ಹೊರಗಡೆ ಉಳಿದಿದ್ದರು. ಬಳಿಕ ಮೈದಾನಕ್ಕೆ ಬಂದಿದ್ದ ಅವರು 5 ಓವರ್ ಬೌಲಿಂಗ್ ಮಾಡಿದರೂ ವಿಕೆಟ್ ಪಡೆಯುವಲ್ಲಿ ವಿಫಲವಾದರುನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದ್ದು, ಅವರ ಬದಲಾಗಿ ಅರ್ಶದೀಪ್ ಸಿಂಗ್ ಆಡುವ ಸಾಧ್ಯತೆ ಇದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಗುಂಪು ಹಂತದ ಪಂದ್ಯ ಇದಾಗಿದ್ದು, ಸೆಮಿಫೈನಲ್‌ಗೆ ಮುನ್ನ ಬೆಂಚ್ ಕಾದಿರುವ ಆಟಗಾರರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಮೊಹಮ್ಮದ್ ಶಮಿಗೆ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ಸಿಗುವುದರಿಂದ ಅವರು ಸೆಮಿಫೈನಲ್ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗಬಹುದು.

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಮುಂತಾದವರು ಭಾರತ ತಂಡದಲ್ಲಿ ಆಡಲಿದ್ದಾರೆ.
 

Author:

...
Editor

ManyaSoft Admin

Ads in Post
share
No Reviews