ದಾಬಸ್‌ ಪೇಟೆ : ಭೀಕರ ರಸ್ತೆ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ದಾಬಸ್‌ ಪೇಟೆ :

ಬೆಂಗಳೂರಿನಿಂದ ತುಮಕೂರು ಕಡೆಗೆ ಬರ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾಬಸ್‌ಪೇಟೆ ಬಳಿ ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗದ ಚಾಲನೆಯಿಂದಲೇ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಗಳಾದ ಗೋಪಾಲ್‌, ಶಶಿಕಲಾ, ದೀಪಿಕಾ ಹಾಗೂ ಕಾರು ಚಾಲಕ ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರಿನ ಸಂಬಂಧಿಕರ ಮನೆಯಲ್ಲಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಇದೇ ವೇಳೆ ಗುಬ್ಬಿ ತಾಲೂಕಿನ ಪುರ ಗ್ರಾಮದಲ್ಲಿದ್ದ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವ್ರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಗುಬ್ಬಿ ಜೆಡಿಎಸ್‌ ಮುಖಂಡ ಬಿ.ಎಸ್‌.ನಾಗರಾಜು ಅಪಘಾತವನ್ನು ಗಮನಿಸಿ, ಕಾರ್ಯಕ್ರಮವನ್ನ ಮೊಟಕುಗೊಳಿಸಿ ಕೂಡಲೇ ಗಾಯಾಳುಗಳ ನೆರವಿಗೆ ಧಾವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಇಬ್ಬರು ಮಕ್ಕಳ ಜೀವ ಉಳಿಸುವ ಕೆಲಸ ಮಾಡಿದ್ದಾರೆ.

Author:

share
No Reviews