SSLC RESULT :
ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದ್ರೆ ಅದು 10 ನೇ ತರಗತಿ ಆದ್ರೆ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಗುವ ಅಂಕಪಟ್ಟಿ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವ ಪೂರ್ಣವಾದ ದಾಖಲಿಯಾಗಿದೆ. ಹೆಸರು ಜನ್ಮ ದಿನಾಂಕ, ಪರಿಶೀಲಿಸಲು ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕಪಟ್ಟಿಯನ್ನು ಆದಾರವಾಗಿ ಪರಿಗಣಿಸಲಾಗುತ್ತಿದೆ. ಮುಂದಿನ ವಿದ್ಯಾಭ್ಯಾಸಕ್ಕೆ ಈ ಪ್ರಮಾಣ ಪತ್ರ ಅತ್ಯವಶ್ಯಕ. ಅದೇ ರೀತಿ ಉದ್ಯೋಗ ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ, ಇನ್ನೂ ಅನೇಕ ರೀತಿಯ ಕೆಲಸ ಕಾರ್ಯಗಳಿಗೆ ಈ ಪ್ರಮಾಣ ಪತ್ರ ಬೇಕೇ ಬೇಕು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಎಂದು ಪರಿಗಣಿಸಲಾಗಿದೆ.
ಕರ್ನಾಟಕ ಎಸ್ ಎಸ್ ಎಲ್ ಸಿ ಜಿಲ್ಲಾವಾರು ಫಲಿತಾಂಶ 2024-2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ. ಒಟ್ಟಾಗಿ ಶೇಕಡಾ 62.34 ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 91.12 ರೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
2024-2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.62.34 ರಷ್ಟು ಫಲಿತಾಂಶ ಅಂದ್ರೆ ಕಳೆದ ವರ್ಷಕ್ಕಿಂತ ಶೇ.8 ರಷ್ಟು ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶೇ.91.12 ರಷ್ಟು ಫಲಿತಾಂಶ ಗಳಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ42.43 ರಷ್ಟು ಫಲಿತಾಂಶ ಗಳಿಸುವ ಮೂಲಕ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ (ಶೇ.91.12) , ಉಡುಪಿ ಜಿಲ್ಲೆ 2ನೇ ಸ್ಥಾನ (ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ.83.19),ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ (ಶೇ82.21) ಹಾಗೂ ಕಲಬುರಗಿ ಕೊನೆಯ ಸ್ಥಾನ (ಶೇ42.43) ಪಡೆದುಕೊಂಡಿದೆ.