ದಕ್ಷಿಣ ಕನ್ನಡ :
ಬಹುಭಾಷಾ ನಟ, ಡ್ಯಾನ್ಸ್ ಮಾಸ್ಟರ್ ಪ್ರಭುದೇವ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವಳದ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ನಟ ಪ್ರಭುದೇವ ಅವರು ಎರಡನೇ ಪತ್ನಿ ಹಿಮಾಮಿ ಸಿಂಗ್ ಹಾಗೂ ಕುಟುಂಬದವರ ಜೊತೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದ್ದು, ಮುಖ್ಯ ಆರ್ಚಕರಿಂದ ಪ್ರಸಾದ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದ್ದಾರೆ.