ನಟ ಡಾಲಿ ಧನಂಜಯ ಮತ್ತು ಧನ್ಯತಾ ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಪುಷ್ಪಗಿರಿ ದೇವಾಲಯಕ್ಕೆ ನಟ ಡಾಲಿ ಧನಂಜಯ್ ಕುಟುಂಬ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಧನ್ಯತಾ ಜೊತೆ ದೇವಾಲಯಕ್ಕೆ ಭೇಟಿ ನೀಡಿದ ನಟ ಧನಂಜಯ ಅವರಿಗೆ ದೇವಸ್ಥಾನದ ಸಿಬ್ಬಂದಿ ಗೌರವ ಸಲ್ಲಿಸಿದರು.
ಯುಗಾದಿ ಹಬ್ಬದ ಹಿನ್ನೆಲೆ ಪತ್ನಿಯೊಂದಿಗೆ ನಟ ಧನಂಜಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಬಳಿಕ ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಇದೆ. ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಪತಿ ನೆಲದ ಮೇಲೆ ಪ್ರಸಾದ ಸ್ವೀಕರಿಸಿದರು. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಇದೆ. ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಪತಿ ನೆಲದ ಮೇಲೆ ಪ್ರಸಾದ ಸ್ವೀಕರಿಸಿದರು