ಗುಬ್ಬಿ :
ಗುಬ್ಬಿ ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಲಿತರ ಕುಂದು ಕೊರತೆಗಳ ಸಭೆಯನ್ನು ಆಯೋಜಿಸಲಾಗಿತ್ತು. ಶಾಸಕ ಎಸ್.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಸಭೆ ನಡೆಯಿತು. ಗುಬ್ಬಿ ತಹಶೀಲ್ದಾರ್ ಆರತಿ ಈ ಕುಂದುಕೊರತೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಇನ್ನು ಸಭೆಯಲ್ಲಿ ಪ್ರಸ್ತಾಪವಾದ ಹಲವು ಸಮಸ್ಯೆಗಳಿಗೆ ಶಾಸಕ ಎಸ್. ಆರ್ ಶ್ರೀನಿವಾಸ್ ಸೂಕ್ತ ಉತ್ತರವನ್ನ ನೀಡಿ ಪರಿಹಾರವನ್ನು ಸೂಚಿಸಿದರು. ಜೊತೆಗೆ ಹಿಂದಿನ ದಲಿತ ಸಭೆಯಲ್ಲಿ ಪ್ರಸ್ತಾಪವಾಗಿದ್ದ ಸಮಸ್ಯೆ ಹಾಗೂ ಅಹವಾಲು ಅರ್ಜಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಲಿಖಿತ ರೂಪದಲ್ಲಿ ಉತ್ತರವನ್ನು ಮಂಡಿಸಲಾಯಿತು. ಈ ವೇಳೆ ಸ್ಮಶಾನ ಭೂಮಿ, ರಸ್ತೆ ತಕರಾರು ಹೀಗೆ ಅನೇಕ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಮ್ಮ, ತಾಲೂಕು ಪಂಚಾಯ್ತಿ ಇಓ ಶಿವಪ್ರಕಾಶ್, ಸಿಪಿಐ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುಳಾದೇವಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು.