ದಾವಣಗೆರೆ:
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮಹದೇವ ಹಾಗೂ ಹನುಮಂತ ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಅವಘಡ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
iಇನ್ನು ಅಪಘಾತ ನಡೆದಿರುವ ಸ್ಥಳಕ್ಕೆ ಹರಿಹರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.