ಶಿರಾ:
ಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು. ನ್ಯಾಯಮೂರ್ತಿಗಳಾದ ಶ್ರೀಯುತ ನರಸಿಂಹಯ್ಯನವರು ಕಾರ್ಯಕ್ರಮಕ್ಕೆ ಚಾಲನೆ ನೀಡಿಡ್ರು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜು ನಾಯ್ಕ್, ವಕೀಲರ ಸಂಘದಅಧ್ಯಕ್ಷರಾದ ಗುರುಮೂರ್ತಿ ಸೇರಿ ಹಲವರು ಭಾಗಿಯಾಗಿದ್ರು.
ಈ ವೇಳೆ ಮಾತನಾಡಿದ ನ್ಯಾಯಮೂರ್ತಿಗಳಾದ ಶ್ರೀಯುತ ನರಸಿಂಹಯ್ಯ, ಕಾನೂನನ್ನು ಯಾವ ಸಂದರ್ಭದಲ್ಲಿ ಕೈಗೆತಿಕೊಳ್ಳಬಾರದು. ಸಮಾಜದಲ್ಲಿ ಕಾನೂನು ಉಲ್ಲಂಘನೆ, ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ತಿಳಿ ಹೇಳುವುದರ ಜೊತೆಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಅನವಶ್ಯಕ ಕಾರ್ಯಗಳನ್ನು ಮಾಡದೇ ಕೇವಲ ಶಿಕ್ಷಣದತ್ತ ಗಮನ ಹರಿಸಬೇಕು ಎಂದರು.