ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಮೂವರು ದಾರುಣ ಸಾವು

ಧಾರವಾಡ : ಧಾರವಾಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೇಲಿನ ಭದ್ರಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಗದಗ್‌ನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಹಿಮ್ಮುಖವಾಗಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಇನ್ನು ವಿಷಯ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews