ಧಾರವಾಡ : ಧಾರವಾಡ ತಾಲ್ಲೂಕಿನ ತೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬ್ಯಾಂಕ್ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಈ ಘಟನೆದಲ್ಲಿ ಕಾರಿನಲ್ಲಿದ್ದ ಅವರ ಪತ್ನಿ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಪ್ರದೇಶ ಮೂಲದ ರಾಹುಲ್ ಶುಕ್ಲಾ (40) ಮೃತ ದುರ್ದೈವಿಯಾಗಿದ್ದಾರೆ. ಬೆಳಗಾವಿಯ ಕ್ಯಾನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಟುಂಬ ಸಮೇತ ಕಾರಿನಲ್ಲಿ ಧಾರವಾಡದಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮೃತರ ಪತ್ನಿ ಶ್ರೇಯಾ ಹಾಗೂ ಮೂರು ವರ್ಷದ ಮಗಳು ಕಿಯಾನಾ ಸಹ ಇದ್ದರು. ಅಪಘಾತದ ಪರಿಣಾಮ ಇಬ್ಬರೂ ಗಾಯಗೊಂಡಿದ್ದು, ತಕ್ಷಣದ ಚಿಕಿತ್ಸೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಪಘಾತ ಸಂಭವಿಸುತ್ತಿದ್ದಂತಯೇ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.