ಧಾರವಾಡ : ಮಳೆ ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರ ಸಾವು..!

ಕಾರ್ಖಾನೆ ಗೋಡೆ ಕುಸಿದಿರುವುದು.
ಕಾರ್ಖಾನೆ ಗೋಡೆ ಕುಸಿದಿರುವುದು.
ಧಾರವಾಡ/ ಹುಬ್ಬಳ್ಳಿ

ಧಾರವಾಡ :

ಭಾರೀ ಮಳೆ ಗಾಳಿಯಿಂದ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಇಂದು ಧಾರವಾಡ ಜಿಲ್ಲೆಯ ಕಲಘಟಗಿ  ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52), ನೂರಾಣಿ ಪ್ಲಾಟ್ ನಿವಾಸಿ ರಫಿಕ್‌ಸಾಬ್ ಚನ್ನಾಪುರ (50) ಮೃತ ಕೂಲಿ ಕಾರ್ಮಿಕರಾಗಿದ್ದಾರೆ. ಇನ್ನು ಘಟನೆಯಲ್ಲಿ ಮಹಾಂತೇಶ ಚವರಗುಡ್ಡ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅಲ್ದೇ ಜೋರಾದ ಗಾಳಿ ಮಳೆ ಬೀಸಿದ್ದರಿಂದ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ. ಈ ಕುರಿತು ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Author:

...
Editor

ManyaSoft Admin

share
No Reviews