MOVIE: ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಮಗುವಿನ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಧ್ರುವ

ನಟ ಧ್ರುವ ಸರ್ಜಾ ಸಿನಿಮಾದಲ್ಲಿ ಮಾತ್ರ ಹಿರೋ ಅಲ್ಲ. ನಿಜಜೀವನದಲ್ಲಿಯೂ ಹೀರೋ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಒಂದು ಪುಟ್ಟ ಮಗುವಿನ ಸಂಕಷ್ಟಕ್ಕೆ ಧ್ರುವ ಸರ್ಜಾ ಸಾಥ್‌ ನೀಡಿದ್ದಾರೆ. ಪುಟ್ಟ ಮಗುವಿನ ಕಣ್ಣಿನಲ್ಲಿ ಪೊರೆ ಬೆಳೆದ ಮಗುವಿನ ಟ್ರೀಟ್ಮೆಂಟ್‌ಗೆ ನಟ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಚಿರಂಜೀವಿ ಎಂಬ ಪುಟ್ಟ ಮಗುವಿನ ಎರಡು ಕಣ್ಣಿನಲ್ಲೂ ಪೊರೆ ಬೆಳೆದ ಹಿನ್ನೆಲೆ ಟ್ರೀಟ್‌ಮೆಂಟ್‌ಗಾಗಿ ಧ್ರುವ ಸಹಕರಿಸಿದ್ದಾರೆ. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಧ್ರುವ ಮಾತನಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಹಾಗಾಗಿ ಪುಟ್ಟ ಮಗುವಿಗೆ ಯಶಸ್ವಿಗಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಮೂಲಕ ಗಾರೆ ಕೆಲಸ ಮಾಡುವ ತಂದೆಯ ಬೆನ್ನೆಲುಬಾಗಿ ನಿಂತಿದ್ದಾರೆ.

ಸುದೀಪ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮ ಕೀರ್ತನಾ ಚಿಕಿತ್ಸೆಗೆ ಸಹಾಯ ಮಾಡಿದ್ದರು. ಇದರ ಚಿಕಿತ್ಸೆಗೆ 16 ಕೋಟಿ ರೂ. ಬೇಕಿರೋದ್ರಿಂದ ಸುದೀಪ್, ನಾನು ನನ್ನ ಕೈಲಾದ ಸಹಾಯ ಮಾಡಿದ್ದೀನಿ, ನೀವೆಲ್ಲರೂ ಕೈಜೋಡಿಸಿ ಎಂದು‌ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಧ್ರುವ ಸರ್ಜಾ ಕೂಡ ಮತ್ತೊಂದು ಪುಟ್ಟ ಮಗುವಿನ ಬಾಳಿಗೆ ಬೆಳಕಾಗಿರುವುದನ್ನು ನೋಡಿ ಫ್ಯಾನ್ಸ್‌ ಖುಷಿಪಟ್ಟಿದ್ದಾರೆ.

 

Author:

...
Sub Editor

ManyaSoft Admin

share
No Reviews