ದೊಡ್ಡಬಳ್ಳಾಪುರ : ಡಾಕ್ಟರ್ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾದ್ನಾ..? ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

ಮಣಿಪಾಲ್‌ ಆಸ್ಪತ್ರೆ ದೊಡ್ಡಬಳ್ಳಾಪುರ
ಮಣಿಪಾಲ್‌ ಆಸ್ಪತ್ರೆ ದೊಡ್ಡಬಳ್ಳಾಪುರ
ತುಮಕೂರು

ದೊಡ್ಡಬಳ್ಳಾಪುರ: ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ಯುವಕನೋರ್ವ ಸಾವನ್ನಪ್ಪಿದ್ದಾನೆ, ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. 23 ವರ್ಷದ ಚಂದನ್‌ ಗೌಡ ಮೃತ ಯುವಕನಾಗಿದ್ದಾನೆ. ಚಿಕ್ಕ ಅಪಘಾತದಲ್ಲಿ ಚಂದನ್‌ಗೌಡ ಕಾಲಿಗೆ ಪೆಟ್ಟಾಗಿದ್ದು, ದೊಡ್ಡಬಳ್ಳಾಪುರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರಿಂದ ಸರಿಯಾದ ಚಿಕಿತ್ಸೆ ಸಿಗದೇ ಯುವಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ.

ಮಣಿಪಾಲ್‌ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಹಿನ್ನೆಲೆ ನರ್ಸ್‌ಗಳಿಂದ ಗಾಯಾಳು ಚಂದನ್‌ಗೆ ಚಿಕಿತ್ಸೆ ನೀಡಲಾಗಿದೆ. ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಳಗ್ಗೆ ಆಗುವಷ್ಟರಲ್ಲಿ ಉಸಿರು ಚೆಲ್ಲಿದ್ದಾನೆ. ಅಲ್ಲದೇ ಆತನನ್ನು ನೋಡಲು ಕುಟುಂಬಸ್ಥರು, ಸಂಬಂಧಿಕರಿಗೆ ಸಿಬ್ಬಂದಿ ಅವಕಾಶ ನೀಡಿಲ್ಲ ಎಂದು ಆರೋಪ ಮಾಡಲಾಗಿದೆ. ಹೀಗಾಗಿ ಆಸ್ಪತ್ರೆ ಮುಂದೆ ಜಮಾಯಿಸಿದ ಸಂಬಂಧಿಕರು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಯುವಕ ಚಂದನ್‌ ಸಾವಿಗೆ ನಿಖರ ಕಾರಣ ಹೇಳಲು ವೈದ್ಯರು ನಿರಾಕರಣೆ ಮಾಡ್ತಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

 

 

Author:

...
Editor

ManyaSoft Admin

Ads in Post
share
No Reviews