ದೊಡ್ಡಬಳ್ಳಾಪುರ: ಮಿನಿ ಬಸ್ ಪಲ್ಟಿ | ಮಗು ಸೇರಿ ಮೂವರಿಗೆ ಗಂಭೀರ ಗಾಯ..!

ಪಲ್ಟಿಯಾದ ಮಿನಿ ಬಸ್
ಪಲ್ಟಿಯಾದ ಮಿನಿ ಬಸ್
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ: 

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿರುವ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಮಗು ಸೇರಿ ಮೂವರಿಗೆ ತೀವ್ರ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿಯಾಗಿಲ್ಲ.

ದೊಡ್ಡಬಳ್ಳಾಪುರ ಗ್ರಾಮಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ,  ಇನ್ನು ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

 

 

Author:

...
Editor

ManyaSoft Admin

Ads in Post
share
No Reviews