ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಹೊಸ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ. ಸಲೀಂ ನೇಮಕವಾಗಿದ್ದಾರೆ. ಇಂದು ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ರಾಜ್ಯ ಪೊಲೀಸ್ ಇಲಾಖೆಗೆ ನೂತನ ನೇತೃತ್ವ ದೊರಕಿದೆ.
ಇದುವರೆಗೆ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಲೋಕ್ ಮೋಹನ್ ಅವರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಈ ಹೊಸ ಪೊಲೀಸ್ ಮಹಾನಿರ್ದೇಶಕರಾಗಿ ಸಲೀಂರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಲೀಂ ಅವರು ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದು, ಹಂಗಾಮಿ ಡಿಜಿ ಐಜಿ ಆಗಿ ಅಧಿಕಾರ ವಹಿಸಲಿದ್ದಾರೆ. ಇಂದು ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ,
ಡಾ. ಎಂ. ಎ. ಸಲೀಂ ಅವರು ಕನ್ನಡಿಗರಾಗಿದ್ದು, ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಅಧಿಕಾರಿಯಾಗಿದ್ದಾರೆ. ಪೊಲೀಸ್ ವಿಭಾಗದಲ್ಲಿ ಶಿಸ್ತಿಗೆ ಹಾಗೂ ಸಾರ್ವಜನಿಕ ಬಳಗದೊಂದಿಗೆ ಉತ್ತಮ ಸಂಪರ್ಕಕ್ಕೆ ಹೆಸರಾಗಿರುವ ಇವರು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಾ. ಸಲೀಂ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿ ಹೊಸ ಕಾರ್ಯತಂತ್ರಗಳಿಗೆ ಮುಂದಾಗುತ್ತಾರೆ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.