ತುಮಕೂರು : ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಎಸ್ಎಸ್ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದು ಮೊದಲ ಬಾರಿಗೆ ಅಲ್ಲ. 2019 ರಲ್ಲಿ, ಮೆಡಿಕಲ್ ಸೀಟ್ ಬ್ಲಾಕಿಂಗ್ ಆರೋಪದ ಹಿನ್ನೆಲೆಯಲ್ಲಿ, ಐಟಿ ಇಲಾಖೆ ಪರಮೇಶ್ವರ್ ಅವರ ನಿವಾಸ ಮತ್ತು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಆ ಸಮಯದಲ್ಲಿ, ಸುಮಾರು ₹5 ಕೋಟಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.
ಇತ್ತೀಚೆಗೆ, ಪರಮೇಶ್ವರ್ ಅವರು ತುಮಕೂರಿನಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಯ ಆಸ್ತಿಗಳನ್ನು ಖರೀದಿಸಿದ್ದಾರೆ. ಹೆಚ್ ಎಂ ಎಸ್ ಕಾಲೇಜು ಮತ್ತು ಬಂಡಿಮನೆ ಕಲ್ಯಾಣ ಮಂಟಪವನ್ನು ಖರೀದಿಸಿದ ಕುರಿತು ವರದಿಗಳು ಬಂದಿವೆ. ಈ ಆಸ್ತಿ ಖರೀದಿಗಳು ಇಡಿ ದಾಳಿಗೆ ಕಾರಣವೇ ಎಂಬ ಅನುಮಾನಗಳು ಒಂದೆಡೆ ವ್ಯಕ್ತವಾಗ್ತಿದ್ರೆ, ಮತ್ತೊಂದೆಡೆ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಪರಮೇಶ್ವರ್ ಅವರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ, ಇಡಿ ದಾಳಿ ನಡೆಯುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.
ಇಡಿ ಅಧಿಕಾರಿಗಳು ತುಮಕೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ದಾಳಿಯ ಹಿಂದಿನ ನಿಖರ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ.