ಚಿಕ್ಕಬಳ್ಳಾಪುರ : ಭೀಮವಾದ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ : 

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷ ಡಾ.ಬಿ.ಎನ್. ವೆಂಕಟೇಶ್ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣದಿಂದ ಪರಿವೀಕ್ಷಣಾ ಮಂದಿರದವರೆಗೂ ಸಂಘದ ಪದಾಧಿಕಾರಿಗಳೊಂದಿಗೆ ಮೆರವಣಿಗೆ ಮೂಲಕ ತೆರಳಿ, ಪರಿವೀಕ್ಷಣಾ ಮಂದಿರದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳನ್ನು ಆಯ್ಕೆ ಮಾಡಿ ನಂತರ ಮಾತನಾಡಿದ ಡಾ.ಬಿ.ಎನ್.ವೆಂಕಟೇಶ್, ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲೂ ಸಂಚಾರ ಮಾಡುತ್ತಿದ್ದು. ಈ ಮೂಲಕ ಬಡ ಕುಟುಂಬಗಳಿಗೆ ನಮ್ಮಿಂದ ಆದ ಸಹಾಯ ಮಾಡಿ, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಕೊಡಿಸುತ್ತೇವೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡೋ ಉದ್ದೇಶದಿಂದ ಭೀಮವಾದ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಲಾಗಿದೆ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಸೂಚಿಸಿರುವ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು, ಯುವಕರು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗರ್ಭಿಣಿ ಮಹಿಳೆಯರಿಗೆ ತಮ್ಮ ಜೀವನ ನಿರ್ವಹಣೆಗಾಗಿ 3000 ರೂಗಳನ್ನು ಸಂಘದ ವತಿಯಿಂದ ನೀಡಲಾಯಿತು.

Author:

...
Sushmitha N

Copy Editor

prajashakthi tv

share
No Reviews