ENG vs IND : ವಿರಾಟ್-ರೋಹಿತ್ ಅನುಪಸ್ಥಿತಿಯಲ್ಲಿ ಯುವ ಟೀಮ್ ಇಂಡಿಯಾ ಸಜ್ಜು

ENG VS IND: ಇಂಗ್ಲೆಂಡ್‌ ಟೆಸ್ಟ್ ಸರಣಿಗೆ ಭಾರತ ತಂಡ ಸಜ್ಜಾಗಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತೀಯ ತಂಡ ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.

ಈ ಹೈವೋಲ್ಟೇಜ್ ಟೆಸ್ಟ್ ಸರಣಿಯು ಜೂನ್ 20ರಿಂದ ಇಂಗ್ಲೆಂಡ್‌ನ ವಿವಿಧ ಸ್ಥಳಗಳಲ್ಲಿ ಆರಂಭವಾಗಲಿದ್ದು, ಭಾರತದ ತಂಡ ತನ್ನ ಸಾಮರ್ಥ್ಯವನ್ನು ತೋರಿಸುವ ಮಹತ್ವದ ಅವಕಾಶ ಇದಾಗಿದೆ. ತಂಡದ ನಾಯಕನಾಗಿ ಶುಭ್ಮನ್ ಗಿಲ್, ಯುವ ಆಟಗಾರರ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ಇದು ನಮ್ಮಿಂದ 18 ವರ್ಷಗಳ ನಂತರ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಚಾನ್ಸ್. ಈ ತಂಡ ಉತ್ಸಾಹ, ಶಿಸ್ತು ಮತ್ತು ಧೈರ್ಯದಿಂದ ನಾವು ಇತಿಹಾಸ ಬರೆಯಲು ಸಜ್ಜಾಗಿದ್ದೇವೆ" ಎಂದು ಗಿಲ್ ಹೇಳಿದ್ದಾರೆ.

ಈ ಸರಣಿಯಲ್ಲಿ ಹಲವು ಯುವ ಪ್ರತಿಭೆಗಳ ಆಯ್ಕೆಯಾಗಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಅಧ್ಯಾಯಕ್ಕೆ ಬಾಗಿಲು ತೆರೆಯಬಹುದು. ವೇಗಿ ಬೌಲಿಂಗ್, ಸ್ಪಿನ್ನಿಂಗ್ ಮತ್ತು ತೀಕ್ಷ್ಣ ಬ್ಯಾಟಿಂಗ್ ಶಕ್ತಿಯೊಂದಿಗೆ ತಂಡದಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್ ಮತ್ತು ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರಿತ್ ಬುಮ್ರಾ. ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್‌ ಟೀಮ್‌ ಇಂಡಿಯಾ ತಂಡದಲ್ಲಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews