ಹಾವೇರಿ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಹಾವೇರಿ :

ಕೆರೆಗೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿ ನಡೆದಿದೆ.

22 ವರ್ಷದ ಉಲ್ಲಾಸ್‌ ಮೃತ ವಿದ್ಯಾರ್ಥಿಯಾಗಿದ್ದಾನೆ. ಈತ ಹಾವೇರಿಯಲ್ಲಿ 2ನೇ ಸೆಮಿಸ್ಟರ್‌ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಯು ಇಂದು ಬೆಳಿಗ್ಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

 

Author:

share
No Reviews