ಕೊಡಗು : ಕೊಡಗಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.

ಇತ್ತೀಚೆಗೆ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ, ಇಂಜಿನಿಯರಿಂಗ್ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಗೆ ಸಂಬಂಧಿಸಿದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಇನ್ನು ಅದೇ ಹಾಸ್ಟೆಲ್‌ನಲ್ಲಿ ಮತ್ತೆ ಪಿರಿಯಾಪಟ್ಟಣ ಮೂಲದ 20 ವರ್ಷದ ಯಶ್ವಂತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಳ್ಳಿಗಟ್ಟುವಿನ CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ – ಎಐ & ಡಿಎಸ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.

ಯಶ್ವಂತ್ ನೆನ್ನೆ ರಾತ್ರಿ ಸುಮಾರು 8:30ರ ಹೊತ್ತಿಗೆ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಇನ್ನು ಘಟನೆ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇನ್ನು ಹಾಸ್ಟೆಲ್ ಆಡಳಿತ ಮಂಡಳಿ ಹಾಗೂ ಕಾಲೇಜು ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ಹಾಸ್ಟೆಲ್ ವ್ಯವಸ್ಥೆ ಕುರಿತ ಚರ್ಚೆಗಳು ಮತ್ತೆ ಮುಂದುವರೆದಿವೆ.

 

Author:

...
Keerthana J

Copy Editor

prajashakthi tv

share
No Reviews