ಕಲಬುರಗಿ:
ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಸಾವುಗಳು ಏರಿಕೆ ಆಗುತ್ತಿದೆ. ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ
ಚಿಕ್ಕನಾಯಕನಹಳ್ಳಿಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಗಂಗಾನಗರ ನಿವಾಸಿಯಾದ 19 ವರ್ಷದ ಕಿರಣ್ ರವಿಕುಮಾರ್ ಬಬಲಾದ ಮೃತ ವಿದ್ಯಾರ್ಥಿಯಾಗಿದ್ದು, ಬೆಳಿಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ರವಿಕುಮಾರ್ ಸಾವಿಗೀಡಾಗಿದ್ದಾನೆ, ಮೃತ ವಿದ್ಯಾರ್ಥಿಯು ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4 ನೇ ಸೆಮಿಸ್ಟರ್ ಓದುತ್ತಿದ್ದ ಎಂದು ತಿಳಿದು ಬಂದಿದೆ.